ಶಾಕಿಂಗ್ ನ್ಯೂಸ್:  ವಸತಿ ಶಾಲೆಯ 317 ಬಾಲಕಿಯ ಸಾಮೂಹಿಕ ಅಪಹರಣ - Mahanayaka

ಶಾಕಿಂಗ್ ನ್ಯೂಸ್:  ವಸತಿ ಶಾಲೆಯ 317 ಬಾಲಕಿಯ ಸಾಮೂಹಿಕ ಅಪಹರಣ

27/02/2021


Provided by

ಲಾಗೋಸ್‌: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 317 ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರ ಅಪಹರಿಸಿರುವ ಘಟನೆ ನಡೆದಿದೆ.

ಇಲ್ಲಿನ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ

ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಇನ್ನೂ ಈ ಬಗ್ಗೆ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ  ಎಂದು ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ