ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು, ತೆಂಗಿನ ಮರ ಬೆಂಕಿಗಾಹುತಿ
ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ.
ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ರವರು ತಮ್ಮ ಜಮೀನುಗಳಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಬೆಳೆದು 18 ತಿಂಗಳಾಗಿದ್ದರೂ ಸಹ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರು ಕಬ್ಬು ಕಟಾವು ಮಾಡದೇ ಇರುವುದರಿಂದ ಈ ದುರ್ಘಟನೆ ನಡೆದಿದೆ. ನಮ್ಮ ಈ ನಷ್ಟಕ್ಕೆ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆ ಅವರು ಪರಿಹಾರ ನೀಡಬೇಕು. ಚಾಮರಾಜನಗರ ಜಿಲ್ಲಾಧಿಕಾರಿಗಳು,ಜಿಲ್ಲಾ ಉಸ್ತುವಾರಿ ಸಚಿವರು ತಹಸಿಲ್ದಾರ್ ರವರು ಸ್ಥಳಕ್ಕೆ ಆಗಮಿಸಿ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ಸ್ಥಳದಲ್ಲೇ ಸೀಮೆಎಣ್ಣೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಸತೀಶ್ ಕುಮಾರ್ ಮಾತನಾಡಿ ನಾವು ಕಬ್ಬು ಬೆಳೆದು 18 ತಿಂಗಳಗಳಾಗಿದೆ ಆದರೂ ಸಹ ಇದುವರೆಗೂ ಕಬ್ಬು ಕಟಾವು ಮಾಡಿಲ್ಲ, ಈ ಘಟನೆಗೆ ಬಣ್ಣಾರಿ ಅಮ್ಮನ ಕಾರ್ಖಾನೆಯವರೇ ನೇರ ಹೊಣೆ, ಜಮೀನಿನಲ್ಲಿದ್ದ ಹನಿ ನೀರಾವರಿ ಪೈಪ್, ಸ್ಟಾರ್ಟರ್, ಸ್ಪಿಂಕ್ಲರ್ ಪೈಪ್, ಮೋಟಾರ್ ಕೇಬಲ್ ಗಳು ಸುಟ್ಟು ಹೋಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಸಂಬಂಧಿಸಿದವರು ಸ್ಥಳಕ್ಕಾಗಿ ಸೂಕ್ತ ಪರಿಹಾರ ಕೊಡದಿದ್ದರೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತ ಮುತ್ತುವೇಲ್ ಮಾತನಾಡಿ ಲೋಕನಹಳ್ಳಿ ಭಾಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಕಬ್ಬು ಬೆಳೆದಿದ್ದೇವೆ. 18 ತಿಂಗಳುಗಳಾದರು ಕಬ್ಬು ಕಟಾವು ಮಾಡಿಲ್ಲ ಇದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಟ್ರಾಫಿಕ್ ಜಾಮ್ : ಲೊಕ್ಕನಹಳ್ಳಿ ಗ್ರಾಮದ ರೈತರುಗಳ ಇಪ್ಪತ್ತಕ್ಕೂ ಹೆಚ್ಚು ಎಕರೆ ಕಬ್ಬು, ಬೆಂಕಿಗಹುತಿಯಾಗಿರುವುದನ್ನು ಖಂಡಿಸಿ ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದ ಹಿನ್ನೆಲೆ ನೂರಾರುವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತರಕಾರಿ ವಾಹನಗಳು ಬಸ್ ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋಮೀಟರ್ ವರೆಗೂ ವಾಹನಗಳು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























