ವಿದ್ಯಾರ್ಥಿನಿಯರ ತಾಯಂದಿರಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕ ಅಮಾನತು! - Mahanayaka
12:29 PM Friday 5 - September 2025

ವಿದ್ಯಾರ್ಥಿನಿಯರ ತಾಯಂದಿರಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕ ಅಮಾನತು!

suresh
29/06/2022


Provided by

ತುಮಕೂರು: ಶಿಕ್ಷಕನೋರ್ವ ವಿದ್ಯಾರ್ಥಿಗಳ ತಾಯಂದಿರ ಮೊಬೈಲ್ ನಂಬರ್ ಪಡೆದುಕೊಂಡು ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಸುರೇಶ್, ತರಗತಿ ಮುಗಿದ ಬಳಿಕ ವಿದ್ಯಾರ್ಥಿಗಳ ತಾಯಂದಿರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನುವ ಪೋಷಕರ ದೂರಿನ ಹಿನ್ನೆಲೆಯಲ್ಲಿ ಮಧುಗಿರಿ ಡಿಡಿಪಿಐ ರೇವಣಸಿದ್ದಪ್ಪ ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ.

ಇದೇ ಸುರೇಶ್ ಗ್ರಾಮದ ಯುವಕರ ಜೊತೆಗೆ ಪಾರ್ಟಿ ಮಾಡುತ್ತಾ, ದುರ್ವರ್ತನೆ ತೋರುತ್ತಿರುವ ಬಗ್ಗೆಯೂ ಪೋಷಕರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗೂಳಿ ಕಾಳಗದ ವೇಳೆ  ನಾಲ್ವರು ಸಾವು: ಕನಿಷ್ಠ 300 ಮಂದಿ ಗಾಯ

ಕೈಗಳನ್ನು ಕಟ್ಟಿಕೊಂಡು 780 ಮೀಟರ್ ಅಗಲದ ನದಿಯನ್ನು ಈಜಿ ದಾಟಿದ ವೃದ್ಧೆ!

ಹೀನಾಯ ಸೋಲಿನ ನಂತರ ಒಟಿಟಿಗೆ ಕಾಲಿಟ್ಟ ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’!

ಬ್ರಾಹ್ಮಣರ ಬಗ್ಗೆ ಹಗುರವಾಗಿ ಮಾತನಾಡಿದರೆ ಹುಷಾರ್… | ಬ್ರಾಹ್ಮಣ ಮುಖಂಡರಿಂದ ಎಚ್ಚರಿಕೆ

 

ಇತ್ತೀಚಿನ ಸುದ್ದಿ