ವಿಜಯಪುರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಶಾಸಕರು – ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ವಾಗ್ವಾದ
ವಿಜಯಪುರ: ಜಿಲ್ಲೆಯಲ್ಲಿ ಇದೀಗ ಮತ್ತೊಮ್ಮೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಸಕ ಹಾಗೂ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ಮಾತಿನ ಜಟಾಪಟಿ ನಡೆದಿದೆ ಬಗ್ಗೆ ವರದಿಯಾಗಿದೆ.
ಶಾಸಕ ಸೋಮನಗೌಡ ಸ್ಥಳೀಯ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ, ನಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಬಿಜೆಪಿ ಮಂಡಳ ಉಪಾಧ್ಯಕ್ಷ ಮುತ್ತುರಾಜ ಹಾಲಿಹಾಳ ಆರೋಪಿಸಿದ್ದಾರೆ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕರ ಬೆಂಬಲಿಗರು, ವಾಗ್ವಾದ ನಡೆಸಿದ್ದಾರೆ. ಇದರಿಂದ ಕೆಲ ಕಾಲ ಸಹನೆ ಕಳೆದುಕೊಂಡ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ, ನಂತರ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಮುಖಂಡರು ಸಹ ಶಾಸಕರು ಹಾಗೂ ಬಿಜೆಪಿ ಮಂಡಳ ಉಪಾಧ್ಯಕ್ಷರನ್ನು ಸಮಾಧಾನ ಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಮೆರಿಕಕ್ಕೆ ವಿಮಾನಯಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ
ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್ : ಕರ್ನಾಟಕ ಹೈಕೋರ್ಟ್‌ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್
ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ಶುಕ್ರವಾರ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ
ಕೋವಿಡ್ ಲಸಿಕೆ ಸಾವು ತಪ್ಪಿಸುತ್ತದೆಯೇ ಹೊರತು ಸೋಂಕು ಬರುವುದನ್ನಲ್ಲ: ಸಚಿವ ಡಾ. ಸುಧಾಕರ್
ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಅವರ ಮೃತದೇಹ ಗೋಣಿಚೀಲದಲ್ಲಿ ಪತ್ತೆ




























