ಒಂಟಿ ಮಹಿಳೆಯ ಕೈಕಾಲು ಕಟ್ಟಿಹಾಕಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ದರೋಡೆಕೋರರು - Mahanayaka
11:15 AM Wednesday 20 - August 2025

ಒಂಟಿ ಮಹಿಳೆಯ ಕೈಕಾಲು ಕಟ್ಟಿಹಾಕಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ದರೋಡೆಕೋರರು

belthangady
13/11/2022


Provided by

ವೇಣೂರು: ಒಂಟಿ ಮಹಿಳೆಯ ಮನೆಗೆ ನ. 12ರ ಸಂಜೆ ಎಂಟ್ರಿಕೊಟ್ಟ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ (67) ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ. ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಎಂಟ್ರಿಕೊಟ್ಟ ಮುಸುಕುದಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ ನ್ನು ದೋಚಿ ಎಂಕ್ಲು ಬತ್ತಿನಾ ಕೆಲಸ ಆಂಡ್ ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ.

ಆರೋಪಿತರು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ