ವಿಷಪೂರಿತ ಮದ್ಯ ಸೇವಿಸಿ ಐವರ ದಾರುಣ ಸಾವು - Mahanayaka

ವಿಷಪೂರಿತ ಮದ್ಯ ಸೇವಿಸಿ ಐವರ ದಾರುಣ ಸಾವು

alcohol
15/01/2022


Provided by

ಬಿಹಾರ್: ವಿಷ ಪೂರಿತ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿರುವ ಘಟನೆ ನಳಂದ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿಪಹಡಿ ಮತ್ತು ಪಹಾಡ್‍ ತಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಭಾಗೋ ಮಿಸ್ತ್ರಿ(55), ಮುನ್ನಾ ಮಿಸ್ತ್ರಿ(55), ಧರ್ಮೇಂದ್ರ(50), ನಾಗೇಶ್ವರ್(50) ಮತ್ತು ಕಾಳಿಚರಣ್ ಮಿಸ್ತ್ರಿ (50) ಎಂಬವರು ಮೃತಪಟ್ಟಿದ್ದಾರೆ.

ಬಿಹಾರದಲ್ಲಿ ಮದ್ಯ ನಿಷೇಧವಿರುವ ಹಿನ್ನೆಲೆಯಲ್ಲಿ ಆಗಾಗ ವಿಷಪೂರಿತ ಮದ್ಯ ಸೇವನೆಯ ಘಟನೆಗಳು ವರದಿಯಾಗುತ್ತಲೇ ಇರುತ್ತದೆ.  ತಮ್ಮವರು ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಮಾಹಿತಿ ಪಡೆದು  ಡಿಎಸ್‍ಪಿ ಮತ್ತು ಎಸ್‍ ಎಚ್‍ ಒ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ನಕಲಿ ಮದ್ಯಗಳನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು!

ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ತಿಳಿದರೆ ಶಾಕ್ ಆಗುತ್ತೀರಿ!

ಯುಪಿ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಬಿಜೆಪಿ ವಿಕೆಟ್‌ಗಳು ಪತನ: ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರಲ್ಲ; ಅಖಿಲೇಶ್ ಯಾದವ್ ಲೇವಡಿ

 

ಇತ್ತೀಚಿನ ಸುದ್ದಿ