ನಟಿ ಖುಷ್ಬೂ ಬಳಿಕ ಕಮಲ ಹಿಡಿಯಲು ತುದಿಗಾಲಲ್ಲಿ ನಿಂತಿರುವ ಮತ್ತೋರ್ವ ನಟಿ - Mahanayaka
11:37 PM Thursday 13 - November 2025

ನಟಿ ಖುಷ್ಬೂ ಬಳಿಕ ಕಮಲ ಹಿಡಿಯಲು ತುದಿಗಾಲಲ್ಲಿ ನಿಂತಿರುವ ಮತ್ತೋರ್ವ ನಟಿ

23/11/2020

ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ವಿಜಯಶಾಂತಿ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಇದೀಗ ಮತ್ತೋರ್ವ ನಟಿ ಬಿಜೆಪಿ ಸೇರ್ಪಡೆಗೆ ಉತ್ಸಾಹ ತೋರಿದ್ದಾರೆ.

ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಹಲವು ದಿನಗಳಿಂದಲೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ವಿಜಯ ಶಾಂತಿ ಅವರು ಅಂತಿಮವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಜಯಶಾಂತಿ ಬಿಜೆಪಿ ಸೇರ್ಪಡೆ ತೀವ್ರ ಕುತೂಹಲ ಮೂಡಿಸಿದ್ದು, ಜಿಹೆಚ್‌ಎಂಸಿ (ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್) ಚುನಾವಣೆಯಲ್ಲಿ ಕೇಸರಿ ಪಾಳಯದಿಂದ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ