ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ - Mahanayaka
5:45 PM Saturday 7 - December 2024

ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

V T Rajashekar
20/11/2024

ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇಖರ್, ಜಾತಿ ವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸದಾ ಸಿಡಿಯುತ್ತಿದ್ದವರು.

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ನಂತರ ಅಲ್ಲಿಂದ ಹೊರಬಂದು 1981ರಲ್ಲಿ ದಲಿತ್ ವಾಯ್ಸ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು.
ಆ ದಿನಗಳಿಂದಲೇ ಪರಿಚಿತರಾಗಿದ್ದ ರಾಜಶೇಖರ್ ಅವರು ಒಬ್ಬ ಹಿರಿಯ ಹಿತೈಷಿಯಾಗಿ ನನಗೆ ಮಾರ್ಗದರ್ಶನ ನೀಡುತ್ತಿದ್ದವರು.

ರಾಜಶೇಖರ್ ಅವರ ಸಾವು ಸಮಾಜಕ್ಕೆ ದೊಡ್ಡ ನಷ್ಟ ಮಾತ್ರವಲ್ಲ, ಅವರಂತಹ ಜನಪರ ಚಿಂತಕರ ನಿಧನದಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕೂಡಾ ಕಷ್ಟ. ತಂದೆಯನ್ನು ಕಳೆದುಕೊಂಡ ಅಮ್ನೆಷ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ, ಮಗ ಸಲೀಲ್ ಶೆಟ್ಟಿ, ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ