10:51 PM Thursday 21 - August 2025

‘ನನಗೆ ಒಂದೇ ಒಂದು ಗುರಿ ಇತ್ತು’: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

24/08/2024

ಶಿಖರ್ ಧವನ್ ವೃತ್ತಿಪರ ಕ್ರಿಕೆಟ್ ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬಿಸಿಸಿಐ, ಡಿಡಿಸಿಎ ಮತ್ತು ಅವರ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

2022ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್ ತಂಡದ ಪರ ಆಡಿದ್ದ ಧವನ್, ಸನ್ ರೈಸರ್ಸ್ ಹೈದರಾಬಾದ್ ಪರ ಒಂದು ಬಾರಿ ಆಡಿ ಐಪಿಎಲ್ ಚಾಂಪಿಯನ್ ಆಗಿದ್ದರು. ಭಾರತದ ಅನುಭವಿ ಆರಂಭಿಕ ಆಟಗಾರ ಕೊನೆಯ ಬಾರಿಗೆ ರಾಷ್ಟ್ರೀಯ ಜರ್ಸಿ ಧರಿಸಿದ ಎರಡು ವರ್ಷಗಳ ನಂತರ ಎಲ್ಲಾ ರೀತಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.

2010ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ ಬಳಿಕ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದೇನೆ. ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ನಾನು ಮುಗಿಸುತ್ತಿರುವಾಗ, ನಾನು ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್..! ಎಂದು ಧವನ್ ‘ಎಕ್ಸ್’ ಪೋಸ್ಟ್ ನಲ್ಲಿ ಬರೆದಿದ್ದಾರೆ.

‘ಜೀವನದಲ್ಲಿ ಮುಂದೆ ಸಾಗಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಭಾರತಕ್ಕಾಗಿ ಇಷ್ಟು ದೀರ್ಘಕಾಲ ಆಡಿದ್ದೇನೆ ಎಂದು ನನ್ನ ಹೃದಯದಲ್ಲಿ ಶಾಂತಿಯಿಂದ ಹೊರಡುತ್ತಿದ್ದೇನೆ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version