ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ - Mahanayaka
2:00 PM Saturday 27 - September 2025

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

s l bhyrappa
24/09/2025

ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.


Provided by

ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.  94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದ ಭೈರಪ್ಪನವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ.

ಭೈರಪ್ಪ ಅವರ ಕಾದಂಬರಿಗಳು:

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ