ಡಿಸಿಎಂ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕುಸಿದು ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ! - Mahanayaka

ಡಿಸಿಎಂ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕುಸಿದು ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ!

10/12/2020

ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದ್ದು, ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ಶಿವರಾಜು(40) ಮೃತಪಟ್ಟ ಬಿಜೆಪಿ ಕಾರ್ಯಕರ್ತರಾಗಿದ್ದಾರೆ.  ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕಾರ್ಯಕ್ರಮ ಮುಕ್ತಾಯವಾಗುವ ಹಂತದಲ್ಲಿ ಈ ಘಟನೆ ನಡೆದಿದೆ. ವೇದಿಕೆಯ ಮೇಲಿದ್ದ ಶಿವರಾಜು ಏಕಾಏಕಿ ಎದೆ ನೋವಿನಿಂದ ಕುಸಿದು ಬಿದ್ದಿದ್ದು, ಈ ವೇಳೆ ಇತರ ಕಾರ್ಯಕರ್ತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ ಅವರು  ಅದಕ್ಕೂ ಮೊದಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು.


Provided by

ಇತ್ತೀಚಿನ ಸುದ್ದಿ