ಇವನು‌ ಮನುಷ್ಯನಾ?: ಆದಿವಾಸಿ ಯುವಕನ ಮೇಲೆ ಮೂತ್ರ ಮಾಡಿದ ಬಿಜೆಪಿ ‌ಮುಖಂಡ - Mahanayaka

ಇವನು‌ ಮನುಷ್ಯನಾ?: ಆದಿವಾಸಿ ಯುವಕನ ಮೇಲೆ ಮೂತ್ರ ಮಾಡಿದ ಬಿಜೆಪಿ ‌ಮುಖಂಡ

04/07/2023


Provided by

ದೇಶದಲ್ಲಿ ಮಾನವೀಯತೆ ಎಂಬ ಪದಕ್ಕೆ ಕಳಂಕ ತರುವಂತಹ ಘಟನೆಯೊಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ.

ಮೆಟ್ಟಿಲುಗಳ ಮೇಲೆ ಕುಳಿತಿದ್ದ ಆದಿವಾಸಿ ಯುವಕನ ಮುಖದ ಮೇಲೆ ಮದ್ಯದ ಅಮಲಿನಲ್ಲಿದ್ದ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜಿಸಿದ್ದಾನೆ. ಈ ನಾಚಿಕೆಗೇಡಿನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಈ ಆರೋಪಿಯ ವಿರುದ್ಧ ನಿಂದನೆಗಳ ಸುರಿಮಳೆಯೇ ಪ್ರಾರಂಭವಾಗಿದೆ.

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜಿಸುವ ವೀಡಿಯೊ ವೈರಲ್ ಆದ ನಂತರ ಮಧ್ಯಪ್ರದೇಶ ಪೊಲೀಸರು ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅದೇ ಸಮಯದಲ್ಲಿ, ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆದೇಶ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ