11:20 PM Friday 12 - September 2025

ವಿದ್ಯಾರ್ಥಿನಿ ಜೊತೆಗೆ ಸ್ನೇಹ ಬೆಳೆಸಿದ್ದಕ್ಕೆ ವಿದ್ಯಾರ್ಥಿಗೆ ಅಮಾನವೀಯ ಥಳಿತ

student
31/08/2022

ಸುಳ್ಯ: ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾರ್ಥಿಗಳ  ಗುಂಪೊಂದು ಅಮಾನವೀಯವಾಗಿ ಥಳಿಸಿರುವ ಘಟನೆ  ಆಗಸ್ಟ್ 30ರಂದು ಕಾಲೇಜಿನ ಮೈದಾನದಲ್ಲಿ ನಡೆದಿದೆ.

ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್(19) ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ಹೇಳಲಾಗಿದ್ದು,  ಈತನಿಗೆ ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್  ಮತ್ತಿತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಲೇಜಿನ ವಿದ್ಯಾರ್ಥಿನಿಯೋರ್ವಳೊಂದಿಗೆ ಸನೀಫ್ ಸ್ನೇಹ ಹೊಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.  ಮಾತನಾಡಲು ಇದೆ ಎಂದು ಕಾಲೇಜು ಮೈದಾನಕ್ಕೆ ಕರೆದ ಇತರ ವಿದ್ಯಾರ್ಥಿಗಳು ಸನೀಫ್ ನ ಶರ್ಟ್ ನ ಕಾಲರ್ ಎಳೆದು ಮರದ ತುಂಡುಗಳಿಂದ ಹಲ್ಲೆ ನಡೆಸಿದ್ದಾರೆ.

ಘಟನೆ ಬಗ್ಗೆ ಸನೀಫ್ ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದು, ಸನೀಫ್ ನನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version