3:57 AM Thursday 29 - January 2026

ಶಾಲಾ ಶುಲ್ಕ ಕಟ್ಟದ ವಿದ್ಯಾರ್ಥಿಯ ತಾಯಿಯ ಮೇಲೆ ಹಲ್ಲೆ | ಓರ್ವ ಬಂಧನ

03/02/2021

ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆಯ ಪತಿ ಗೂಂಡಾಗಿರಿ ನಡೆಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ಪಿಡಬ್ಲ್ಯೂಡಿ ಕ್ಯಾಂಪ್ ನ ಮಾಂಟೆಸ್ಸರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಸಂಪೂರ್ಣವಾಗಿ ಕಟ್ಟಿಲ್ಲ ಎಂದು ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮೇಲೆ ಹಲ್ಲೆ ನಡೆಸಲಾಗಿದ್ದು, ಸತೀಶ್ ಕುಮಾರ್ ಎಂಬ ವ್ಯಕ್ತಿ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಶಾಲಾ ಶುಲ್ಕ ಕಡಿಮೆ ಮಾಡುವಂತೆ ಪೋಷಕರು ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಆಡಳಿತ ಮಂಡಳಿ ಒಪ್ಪಿಲ್ಲ. ಅಲ್ಲದೇ ಶಾಲಾ ಶುಲ್ಕ ಕಟ್ಟದೇ ಕಿರಿಕಿರಿ ಮಾಡುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಪೋಷಕರು ಹಾಗೂ ದೂರುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.  ಈ ವೇಳೆ ವಿದ್ಯಾರ್ಥಿಯ ತಾಯಿಯ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಾಲಾ ಮುಖ್ಯಸ್ಥೆ ಜ್ಯೋತಿ ಹಾಗೂ ಅವರ ಪತಿ ಸತೀಶ್ ವಿರುದ್ಧ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version