10:54 PM Tuesday 27 - January 2026

ಇಂಜಿನಿಯರಿಂಗ್ ವಿದ್ಯಾರ್ಥಿಯ ಅತ್ಯಾಚಾರ: ಸ್ನೇಹಿತನ ಬಂಧನ

arrest
28/10/2021

ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿಯಯನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎಂದು ಗುರುತಿಸಲಾಗಿದೆ.

ಘಟನೆಯು ಅಕ್ಟೋಬರ್ 16ರಂದು ಉಡುಪಿಯ ಇಂದ್ರಾಳಿ ಫ್ಲ್ಯಾಟ್ ನಲ್ಲಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಗೆಳತಿಯ ಮೇಲೆ ಆರೋಪಿ ಆರ್ಯನ್ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version