ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಇಲ್ಲಿದೆ ಮಾಹಿತಿ - Mahanayaka
10:09 PM Thursday 12 - December 2024

ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಇಲ್ಲಿದೆ ಮಾಹಿತಿ

power cut
01/11/2022

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಈ ಕೆಳಕಂಡ ದಿನಾಂಕಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 2ರಂದು ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎಲ್ಲೂರು, ಯಾಶ್ ಟೆಕ್ ಮತ್ತು ಬೆಳಪು ಫೀಡರ್‌ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬರ್ಪಾಣಿ, ಎಲ್ಲೂರು, ಪಣಿಯೂರು, ಕುಂಜಾನುಗುಡ್ಡೆ, ಗುರುಗುಂಡಿ, ಕುತ್ಯಾರು, ಬೆಳಪು ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 2ರಂದು ಬೆಳಗ್ಗೆ 9 ರಿಂದ ಸಂಜೆ 5:30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ ಹಾಗೂ 110/11 ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 3 ರಂದು ಬೆಳಗ್ಗೆ 9:30  ರಿಂದ ಸಂಜೆ 5:30 ರವರೆಗೆ ಹಾಗೂ 110/11 ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಬಡಾ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್.ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚೇರ್ಕಾಡಿ ಮತ್ತು ಕೊಕ್ಕರ್ಣೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಫಾರ್ಮ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 4 ರಂದು ಬೆಳಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ