ವಿಜಯವಾಣಿ ವರದಿಗಾರ ನರೇಂದ್ರ ಮರಸಣಿ ಅವರಿಗೆ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿ! - Mahanayaka
5:07 AM Wednesday 10 - September 2025

ವಿಜಯವಾಣಿ ವರದಿಗಾರ ನರೇಂದ್ರ ಮರಸಣಿ ಅವರಿಗೆ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿ!

manglore'
29/03/2023

ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು.


Provided by

ಈ ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ನರೇಂದ್ರ ಅವರ ‘ಮತ್ತಾವಿಗೆ ಮತ್ಯಾವಾಗ ಸೇತುವೆ’ ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ. ಮೆಸ್ಕಾಂ ತಾಂತ್ರಿಕ ನಿರ್ದೇಶಕ ರಮೇಶ್ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ಹಿರಿಯ ಪತ್ರಕರ್ತ ಶ್ರೀಕರ ಎಲ್. ಭಂಡಾರ್ಕರ್ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಮುಹಮ್ಮದ್ ಆರೀಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ