ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗು | ವಿಡಿಯೋ ವೈರಲ್ - Mahanayaka
9:56 AM Sunday 15 - September 2024

ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗು | ವಿಡಿಯೋ ವೈರಲ್

30/12/2020

ಬೆಳ್ತಂಗಡಿ:  ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ.

ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್ ಘೋಷಣೆ ಕೂಗುತ್ತಿದ್ದರು. ಈ ವೇಳೆ ಮಧ್ಯೆ “ಪಾಕಿಸ್ತಾನ್ ಜಿಂದಾಬಾದ್” ಎಂಬ ಕೂಗು ಕೇಳಿ ಬಂದಿದೆ.

ಎಸ್ ಡಿಎಂ ಪಿಯು ಕಾಲೇಜು ಮತ ಎಣಿಕಾ ಕೇಂದ್ರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್ ಘೋಷಣೆ ಕೂಗುತ್ತಿದ್ದಂತೆಯೇ ಮಧ್ಯೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಧ್ವನಿ ಕೇಳಿದೆ. ಈ ಧ್ವನಿ ಕೇಳುತ್ತಿದ್ದಂತೆಯೇ ಎಸ್ ಡಿಪಿಐ ಕಾರ್ಯಕರ್ತರು  ಗೊಂದಲಕ್ಕೀಡಾಗಿ ತಕ್ಷಣವೇ ಘೋಷಣೆ ಕೂಗುವುದನ್ನು ನಿಲ್ಲಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.


Provided by

ಇನ್ನೂ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾನಾ ರೀತಿಯ ತಲೆ ಬರಹದಡಿಯಲ್ಲಿ ವೈರಲ್ ಆಗಿದೆ.  ಈ ಬಗ್ಗೆ ದೂರು ದಾಖಲಾಗಿದೆ ಎಂಬೆಲ್ಲ ವದಂತಿಗಳೂ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಅಥವಾ ಸ್ಪಷ್ಟ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಗಮನ ಹರಿಸುವಂತೆ ಜನ ಒತ್ತಾಯಿಸುತ್ತಿದ್ದಾರೆ.

ವಿಡಿಯೋ ಕೃಪೆ: ದೈಜಿವರ್ಲ್ಡ್

ಇತ್ತೀಚಿನ ಸುದ್ದಿ