ಚಂದ್ರನ ಮೇಲೆ ಹಾರಿ ಮತ್ತೊಂದೆಡೆ ಸುರಕ್ಷಿತವಾಗಿ ಲ್ಯಾಂಡ್ ಆದ ವಿಕ್ರಮ್ ಲ್ಯಾಂಡರ್!

Vikram Lander
04/09/2023

ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮತ್ತೊಂದು ಸಾಧನೆ ಮಾಡಿದ್ದು, ತಾನಿದ್ದ ಪ್ರದೇಶದಿಂದ ಸುಮಾರು ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ.

ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ ( ಇದ್ದ ಜಾಗದಿಂದ ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಇಂಜಿನ್ ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.

ಭವಿಷ್ಯದಲ್ಲಿ ಯೋಜನೆಯ ಉದ್ದೇಶ ಮುಗಿದ ಬಳಿಕ ಲ್ಯಾಂಡರ್ ಗಳನ್ನು ವಾಪಸ್ ಭೂಮಿಗೆ ತರುವ ಹಾಗೂ ಮಾನವ ಸಹಿತ ಯೋಜನೆಗಳನ್ನು ಉತ್ತೇಜಿಸುವುದು ಈ ಪ್ರಯೋಗದ ಪ್ರಮುಖ ಉದ್ದೇಶವಾಗಿದೆ. ವಿಕ್ರಮ್ ಲ್ಯಾಂಡರ್ ನ ಎಲ್ಲ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯಕರವಾಗಿವೆ. ನಿಯೋಜಿತ ರ‍್ಯಾಂಪ್, ChaSTE ಮತ್ತು ILSA ಗಳನ್ನು ಮಡಚಲಾಗಿತ್ತು. ಪ್ರಯೋಗದ ನಂತರ ಅವುಗಳನ್ನು ಯಶಸ್ವಿಯಾಗಿ ಮರುನಿಯೋಜಿಸಲಾಗಿದೆ ಎಂದು ಇಸ್ರೋ ಹೇಳಿದೆ.

ಇತ್ತೀಚಿನ ಸುದ್ದಿ

Exit mobile version