ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ - Mahanayaka

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

siddaramaiah
12/09/2023


Provided by

ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು.

ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇತ್ತೀಚಿನ ಸುದ್ದಿ