ಲಾಂಗ್ ಹಿಡಿದು ರೀಲ್ಸ್: ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ, ರಜತ್ ಅರೆಸ್ಟ್

24/03/2025
ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಅವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ಇತ್ತೀಚೆಗೆ ವಿನಯ್ ಹಾಗೂ ರಜತ್ ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಇವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಹಾಗೂ ವಿನಯ್ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: