ಒಲಿಂಪಿಕ್ಸ್ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಮ್ಮಿ: ವಿಶ್ವ ಪದಕ ವಿಜೇತೆ ವಿನೇಶ್ ಆತಂಕ

2022 ರಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಈ ಬಾರಿ ಒಲಿಂಪಿಕ್ಸ್ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ತಡೆಯಾಗಬಹುದಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಹೊತ್ತ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತವರ ಡಮ್ಮಿಯಾಗಿರುವ ಈಗಿನ ಫೆಡರೇಷನ್ ಅಧ್ಯಕ್ಷ ಸಂಜಯ್ ಸಿಂಗ್ ತನಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.
ತಮ್ಮ ಸಹಾಯಕ ಸಿಬ್ಬಂದಿಗೆ ಅಡ್ಡಿಪಡಿಸಲಾಗುತ್ತಿದೆ ಹಾಗೂ ತಮ್ಮನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸುವ ಭಯವೂ ಇದೆ ಎಂದು 29 ವರ್ಷದ ವಿನೇಶ್ ಫೋಗಟ್ ಹೇಳಿದ್ದಾರೆ.
2018 ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆಯೂ ಆಗಿರುವ ಫೋಗಟ್ ಮುಂದುವರಿದು ಮಾತನಾಡುತ್ತಾ, ಕುಸ್ತಿ ತಂಡದ ಎಲ್ಲಾ ಕೋಚ್‌ಗಳು ಬ್ರಿಜ್ ಭೂಷಣ್ ಮತ್ತವರ ತಂಡದ ಮೆಚ್ಚಿನವರು. ಹಾಗಿರುವಾಗ ಅವರು ನಾನು ಕುಡಿಯುವ ನೀರಿನಲ್ಲಿ ಏನಾದರೂ ಸ್ಪರ್ಧೆಯ ಸಂದರ್ಭ ಬೆರೆಸಿದರೆ?” ಎಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಹೊರಿಸಿ ಪ್ರತಿಭಟಿಸಿದ ಮೂವರು ಪ್ರಮುಖ ಕುಸ್ತಿಪಟುಗಳಲ್ಲಿ ವಿನೇಶ್ ಫೋಗಟ್ ಕೂಡ ಒಬ್ಬರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth