5:39 PM Thursday 22 - January 2026

ಸೋತು ಗೆದ್ದ ವಿನೇಶ್ ಫೋಗಟ್ ರಾಜ್ಯಸಭೆಗೆ ನಾಮನಿರ್ದೇಶನ‌ ಸಾಧ್ಯತೆ: ಕಾಂಗ್ರೆಸ್ ಚಿಂತನೆ

08/08/2024

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್‌ ಪ್ರವೇಶಿಸಿ 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್‌ ಯೋಜಿಸುತ್ತಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್‌ ಮುಖಂಡ ಅಂಕಿತ್ ಮಯಾಂಕ್, “ವಿನೇಶ್ ಫೋಗಟ್ ರನ್ನು ಹರಿಯಾಣದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಪರಿಗಣಿಸುತ್ತಿದೆ” ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯಸಭೆಯಲ್ಲಿ ದೀಪೇಂದರ್ ಸಿಂಗ್ ಹೂಡಾರ ಅಧಿಕಾರವಧಿ ಮುಗಿದಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಫೋಗಟ್‌ ರನ್ನು ನಾಮರ್ನಿದೇಶನ ಮಾಡಲು ಕಾಂಗ್ರೆಸ್‌ ಚಿಂತಿಸುತ್ತಿದೆ” ಎಂದು ಮಯಾಂಕ್ ತಿಳಿಸಿದ್ದಾರೆ.

“ಕಾಂಗ್ರೆಸ್‌ನ ಅದ್ಭುತ ಕ್ರಮ, ನಮ್ಮ ರಾಷ್ಟ್ರೀಯ ನಾಯಕಿ ವಿನೇಶ್ ಫೋಗಟ್ ಎಲ್ಲ ರೀತಿಯ ಗೌರವಕ್ಕೆ ಅರ್ಹರು” ಎಂದು ಪೋಸ್ಟ್‌ ಮಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಫೋಗಟ್, ಪ್ರಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಕುಸ್ತಿಪಟು ಎಂದೇ ಖ್ಯಾತಿ ಪಡೆದಿದ್ದ ಜಪಾನ್‌ನ ಯುಯಿ ಸುಸಾಕಿ ಯವರನ್ನು ಸೋಲಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದರು. ಕ್ವಾರ್ಟರ್‌ಫೈನಲ್, ಸೆಮಿಫೈನಲ್‌ಗಳನ್ನು ಗೆದ್ದು, ಫೈನಲ್ ತಲುಪಿಸಿದ್ದರು. ಆದರೆ, ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರಿಶೀಲನೆಯಲ್ಲಿ ಅವರು 50 ಕಿ.ಜಿ.ಗಿಂತ 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದಾರೆ ಎಂದು ಅವರನ್ನು ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗಿದೆ.

ಫೋಗಟ್‌ ಸ್ಪರ್ಧೆಯಿಂದ ಹೊರಗುಳಿದಿದ್ದರೂ, ಅವರಿಗೆ ಭಾರತೀಯರು ಪ್ರೀತಿಯ ಮಳೆಯನ್ನೇ ಸುರಿಸುತ್ತಿದ್ದಾರೆ. ನೀವು ಸ್ಪರ್ಧೆಯಿಂದ ಹೊರಗುಳಿದಿರಬಹುದು, ನಮ್ಮ ಹೃದಯದಿಂದಲ್ಲ ಎಂದು ಸಂತೈಸುತ್ತಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version