ಹೆಗಲ ಮೇಲೆ ಕೈ ಹಾಕಿ ಮಾತನಾಡಿದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ: ಫೋಟೋ ವೈರಲ್ - Mahanayaka

ಹೆಗಲ ಮೇಲೆ ಕೈ ಹಾಕಿ ಮಾತನಾಡಿದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ: ಫೋಟೋ ವೈರಲ್

virat dhoni
23/03/2024


Provided by

ಇಂಡಿಯನ್ ಪ್ರೀಮಿಯರ್ ಲೀಗ್‌(IPL) ನ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಮ್ಯಾಚ್‌ ನಲ್ಲಿ RCB ಮ್ಯಾಚ್‌ ಸೋತರೂ, ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಕ್ರಿಕೆಟ್‌ ಮೈದಾನದಲ್ಲಿ ಹೆಗಲ ಮೇಲೆ ಕೈ ಹಾಕಿಕೊಂಡು ಮಾತನಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಈ ವೇಳೆ ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್ ​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು. ಇಬ್ಬರೂ ಅಪ್ಪಿಕೊಂಡು, ಹೆಗಲ ಮೇಲೆ ಕೈ ಹಾಕಿ ನಗುತ್ತಾ  ಸ್ವಲ್ಪ ಸಮಯದವರೆಗೆ ಮಾತುಕತೆ ನಡೆಸಿದರು.

ವಿರಾಟ್‌ ಮತ್ತು ಧೋನಿಯ ಮಾತುಕತೆಯ ಫೋಟೋಗಳು  ಕೆಲವೇ ನಿಮಿಷಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. 2022ರ ಐಪಿಎಲ್‌ ನಲ್ಲಿ ಮುಖಾಮುಖಿಯಾದ ನಂತರ ಇದೇ ಮೊದಲ ಬಾರಿಗೆ ಕೊಹ್ಲಿ ಧೋನಿ ಮುಖಾಮುಖಿಯಾಗಿದ್ದರು.‌


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ