ಟಿ20 ವಿಶ್ವಕಪ್ ಗೆಲ್ಲಲು ವಿರಾಟ್ ಕೊಹ್ಲಿ ಮಾತ್ರ ಕಾರಣವಲ್ಲ: ಅಂಬಾಟಿ ರಾಯುಡು

ಟಿ20 ವಿಶ್ವಕಪ್ ಫೈನಲ್ ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲುವು ದಾಖಲಿಸುವ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ.
ಇದೀಗ ಈ ಪಂದ್ಯ ಗೆಲ್ಲಲು ಯಾರು ಕಾರಣ ಎನ್ನುವ ವಿಚಾರ ಚರ್ಚೆಯಲ್ಲಿದೆ. ಈ ನಡುವೆ ಅಂಬಾಟಿ ರಾಯುಡು ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಸೌತ್ ಆಫ್ರಿಕಾ ವಿರುದ್ಧ ಗೆಲ್ಲಲು ಟೀಮ್ ಇಂಡಿಯಾದ ಪ್ರತಿಯೊಬ್ಬ ಆಟಗಾರನೂ ಕಾರಣ ಎಂದು ಹೇಳಿದ್ದಾರೆ.
ವಿಶ್ವಕಪ್ ಗೆಲ್ಲಲು ವಿರಾಟ್ ಕೊಹ್ಲಿ ಮಾತ್ರ ಕಾರಣವಲ್ಲ ಎಂದಿರುವ ಅವರು, ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದರೂ ಟೀಮ್ ಇಂಡಿಯಾ ಗೆಲುವಿಗೆ ಅವರೊಬ್ಬರೇ ಕಾರಣವಲ್ಲ, ಡೇವಿಡ್ ಮಿಲ್ಲರ್ ಕ್ಯಾಚ್ ಹಿಡಿದ ಸೂರ್ಯಕುಮಾರ್ ಯಾದವ್ ಮತ್ತು ಕ್ಲಾಸೆನ್ ವಿಕೆಟ್ ತೆಗೆದ ಹಾರ್ದಿಕ್ ಪಾಂಡ್ಯ ಅವರ ಪಾತ್ರವೂ ಇದೆ. ಕೊಹ್ಲಿ ಒಬ್ಬರೇ ಪಂದ್ಯ ಗೆಲ್ಲಲು ಕಾರಣ ಅಲ್ಲ ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97