ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು - Mahanayaka

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

suiced
21/02/2022

ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವಾರದ ಹಿಂಜೆ ಮರ್ಕಂಜದ ತನ್ನ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಇಲಿಪಾಷಣ ಸೇವಿಸಿದ್ದಾಳೆ ಎನ್ನಲಾಗಿದೆ.

ಅಸ್ವಸ್ಥಳಾಗಿರುವ ಈಕೆಯನ್ನು ತಕ್ಷಣ ಮನೆಯವರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

ಯುವತಿಯ ಖಾಸಗಿ ಫೋಟೋ ಆಕೆಯ ತಂದೆಗೆ ಕಳುಹಿಸಿ ಬೆದರಿಕೆ: ರೌಡಿಶೀಟರ್ ಬಂಧನ

 

ಇತ್ತೀಚಿನ ಸುದ್ದಿ