ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು - Mahanayaka

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

sundari
02/01/2023


Provided by

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಮಹಿಳೆ ಸುಂದರಿ(25) ಎಂಬಾಕೆಯಾಗಿದ್ದಾಳೆ.  ಈಕೆ ಮದ್ಯಪಾನದ ಚಟ ಹೊಂದಿದ್ದಳು ಎನ್ನಲಾಗಿದ್ದು, ಡಿ.12ರಂದು ವಿಷೇ ಸೇವಿಸಿದ್ದಳು. ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ಬಳಿಕ ಈಕೆಯನ್ನು ಡಿ 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ