ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು - Mahanayaka
7:53 PM Wednesday 10 - December 2025

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

poison
16/08/2022

ಬೆಳ್ತಂಗಡಿ: ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬೆದ್ರಬೆಟ್ಟುವಿನಲ್ಲಿ ಸಂಭವಿಸಿದೆ.

ಬೆದ್ರಬೆಟ್ಟು ನಿವಾಸಿ ಕೂಸಪ್ಪ ಪೂಜಾರಿ(52) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಜು.28ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ವಿಷ ಸೇವಿಸಿದ್ದನ್ನು ಕಂಡ ಮನೆಯವರು ಮಂಗಳೂರಿನ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಕೂಸಪ್ಪ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ