ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಸಾವು | ಹಲವರ ಪರಿಸ್ಥಿತಿ ಚಿಂತಾಜನಕ
21/11/2020
ಪ್ರಯಾಗ್ ರಾಜ್: ಉತ್ತರಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಸಾವಿಗೀಡಾಗಿದ್ದು, ಲಕ್ನೋ ಮತ್ತು ಫಿರೋಜಾಬಾದ್ ನಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಸಂಭವಿಸಿದೆ.
ಪ್ರಯಾಗರಾಜ್ ಜಿಲ್ಲೆಯ ಫುಲ್‌ಪುರ ಪೊಲೀಸ್ ಠಾಣೆ ಪ್ರದೇಶದ ಅಮಿಲಿಯಾ ಗ್ರಾಮದಲ್ಲಿ ಇದೀಗ ಇಂತಹದ್ದೊಂದು ದುರಂತ ನಡೆದಿದ್ದು, ವಿಷಪೂರಿತ ಮದ್ಯ ಸೇವಿಸಿದ ನಾಲ್ವರು ಸಾವನ್ನಪ್ಪಿದ್ದರೆ, ಹಲವರು ಅಸ್ವಸ್ಥರಾಗಿದ್ದಾರೆ. ಕೆಲವರ ಪರಿಸ್ಥಿತಿಯಂತೂ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಮೃತರೆಲ್ಲರೂ ಸರ್ಕಾರಿ ಮದ್ಯದಂಗಡಿಯಿಂದಲೇ ಸಾರಾಯಿ ಖರೀದಿ ಮಾಡಿದ್ದರು ಎಂದು ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸಿದಾಗ ಬೆಳಕಿಗೆ ಬಂದಿದೆ. ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಡಿ.ಎಂ. ಭಾನು ಗೋಸ್ವಾಮಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿದ್ದಾರೆ.