ವಿಟ್ಲ: ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ - Mahanayaka

ವಿಟ್ಲ: ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ

vaiga lakshmi
23/02/2026

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೊಡಂಗಾಯಿ ಮೈತ್ರೇಯಿ ಗುರುಕುಲದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಗುರುಕುಲದ ಆವರಣದ ಕೆರೆಯಲ್ಲಿ ಸೋಮವಾರ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಿಂದ (ಫೆಬ್ರವರಿ 22) ನಾಪತ್ತೆಯಾಗಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿ ಕಾಣೆಯಾದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸುತ್ತಿದ್ದಾಗ, ಇಂದು ಗುರುಕುಲದ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಿಂದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ