4:56 PM Tuesday 8 - September 2026

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಆರೋಪಿಗಳ ಬಂಧನ

pocso case
08/09/2026

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಆರೋಪಿಗಳು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕನು ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ಒಟ್ಟು ಆರು ಪ್ರಕರಣಗಳನ್ನು (ಅಪರಾಧ ಸಂಖ್ಯೆ 185/2026 ರಿಂದ 190/2026ರವರೆಗೆ) ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೋಕ್ಸೋ ಕಾಯ್ದೆ–2012ರ ವಿವಿಧ ಕಲಂಗಳಡಿ (4(2), 5(m), 6 ಮತ್ತು 8) ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ವಿಟ್ಲ ಪೊಲೀಸರು, ಜವಾದ್, ಶಹೀದ್ ಹಾಗೂ ರಿಯಾಝ್ ಎಂಬ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi
Exit mobile version