12:19 AM Saturday 20 - September 2025

ಒಕ್ಕಲಿಗ ಸಮುದಾಯದ ಸಭೆ : ಜಾತಿ ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ

20/09/2025

ಬೆಂಗಳೂರು: ಸೆಪ್ಟಂಬರ್ 22ರಿಂದ ಜಾತಿ ಸಮೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆ ನಡೆಯಿತು. ಈ ವೇಳೆ ಜಾತಿ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಅಂತ ಬರೆದುವಂತೆ ನಿರ್ಣಯ ಕೈಗೊಳ್ಳಲಾಯಿತು.

ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶನ‌ ಮಾಡಿದರು. ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಶ್ರೀ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸಂಸದ ಡಾ.ಸುಧಾಕರ್, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಮಾಜಿ ಡಿಸಿಎಂ ಅಶ್ವತ್ಥ್​ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಮುದಾಯದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.

ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಉಪ ಜಾತಿಯಲ್ಲೂ ಒಕ್ಕಲಿಗ ಎಂದೇ ನಮೂದಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಯಾರೂ ಗೊಂದಲ ಮಾಡಿಕೊಳ್ಳದಂತೆ ನಿರ್ಮಲಾನಂದನಾಥ ಶ್ರೀ ಸಲಹೆ ನೀಡಿದರು. ಈ ನಿರ್ಣಯವನ್ನು ನಿರ್ಮಲಾನಂದನಾಥ ಶ್ರೀ ಮಂಡಿಸಿದ್ದು, ಅದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿ ಹಲವು ನಾಯಕರು ಅನುಮೋದನೆ ಕೊಟ್ಟರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version