ಮತಗಳ್ಳತನ: ಬಿಜೆಪಿ ಅಧಿಕಾರಕ್ಕೆ ಬರಲು ಇದೇ ಕಾರಣ: ಸಿಎಂ ಸಿದ್ದರಾಮಯ್ಯ - Mahanayaka
11:42 PM Saturday 8 - November 2025

ಮತಗಳ್ಳತನ: ಬಿಜೆಪಿ ಅಧಿಕಾರಕ್ಕೆ ಬರಲು ಇದೇ ಕಾರಣ: ಸಿಎಂ ಸಿದ್ದರಾಮಯ್ಯ

siddaramaiah
08/11/2025

ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅವರು ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ನಾಶಪಡಿಸಿದ್ದಾರೆ. ಚುನಾವಣಾ ಆಯೋಗ ಸೇರಿದಂತೆ ಅವುಗಳನ್ನು ಕೇಂದ್ರ ಸರ್ಕಾರದ ತನ್ನ ಕೈಗೊಂಬೆಯನ್ನು ಆಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬಿಜೆಪಿ ‘ಮತ ಕಳ್ಳತನದಲ್ಲಿ ಪರಿಣಿತರು’ ಎಂದು ಸಾಬೀತುಪಡಿಸಿದೆ ಎಂದು ಹೇಳಿರುವ ಸಿಎಂ, ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಇದೇ ಕಾರಣ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷವು ತನ್ನ ಸಹಿ ಅಭಿಯಾನದ ಭಾಗವಾಗಿ ರಾಜ್ಯದಲ್ಲಿ ‘ಮತ ಕಳ್ಳತನ’ದ ವಿರುದ್ಧ 1.12 ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿದೆ. ಬಿಜೆಪಿಗರು ಸುಳ್ಳು ಹೇಳುವುದರಲ್ಲಿ ಕೇವಲ ಪರಿಣತರಲ್ಲ, ಸುಳ್ಳು ಅವರ ಮನೆ ದೇವರು. ಅವರು ಅದಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ಮತ ಕಳ್ಳತನದಲ್ಲಿ ಪರಿಣಿತರು ಎಂದು ಸಾಬೀತುಪಡಿಸಿದ್ದಾರೆ. ಮತ ಕಳ್ಳತನ ಅವರ ವೃತ್ತಿಯಾಗಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಮತ ಕಳ್ಳತನದ ಮೂಲಕ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಗೆದ್ದಿದೆ. ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣದಲ್ಲಿ ಅವುಗಳನ್ನು ಪುರಾವೆಗಳೊಂದಿಗೆ ಬಹಿರಂಗಪಡಿಸಿದ್ದಾರೆ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ