ಲೋಕಸಭಾ ಚುನಾವಣೆಯ 4ನೇ ಸುತ್ತಿನ ಮತದಾನ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾರ್ಯಕರ್ತನ ಹತ್ಯೆ

13/05/2024

10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸ್ಥಾನಗಳಿಗೆ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ ಅನೇಕ ದೊಡ್ಡ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ಹಿಂದಿನ ಸುತ್ತಿನ ಮತದಾನದ ವೇಳೆ ಹಿಂಸಾಚಾರಕ್ಕೆ ಗುರಿಯಾಗಿದ್ದ ಬಂಗಾಳದಲ್ಲಿ ಇಂದು ಕಚ್ಚಾ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಬೋಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದೆ.

ಆಂಧ್ರಪ್ರದೇಶದ ಎಲ್ಲಾ 175 ವಿಧಾನಸಭಾ ಸ್ಥಾನಗಳು ಮತ್ತು ಒಡಿಶಾದ 28 ವಿಧಾನಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಮತದಾನ ನಡೆಯುತ್ತಿದೆ.
20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 283 ಲೋಕಸಭಾ ಕ್ಷೇತ್ರಗಳಲ್ಲಿ ಮೂರು ಹಂತಗಳಲ್ಲಿ ಮತದಾನ ಮುಕ್ತಾಯಗೊಂಡಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version