2:40 AM Saturday 17 - January 2026

ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯನ್ನು ಹೊಡೆದು ಕೊಂದ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

inspector arrest
23/06/2021

ಚೆನ್ನೈ: ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೋರ್ವನನ್ನು ಥಳಿಸಿಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಮಿಳುನಾಡಿನ ಎಥಾಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪೆರಿಯಾಸ್ವಾಮಿಯನ್ನು ಬಂಧಿಸಲಾಗಿದೆ.

ಮುರುಗೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬರುತ್ತಿದ್ದ ವೇಳೆ ಸೇಲಂ ನಗರದ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಮುರುಗೇಶ್ ನಡುವೆ ವಾದ ವಿವಾದ ನಡೆದಿದ್ದು, ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮುರುಗೇಶ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೇಳಲಾಗಿದೆ.

ಮುರುಗೇಶ್ ಗೆ ಪೊಲೀಸರು ಥಳಿಸುತ್ತಿದ್ದ ಸಂದರ್ಭದಲ್ಲಿ ಆತನ ಸ್ನೇಹಿತ ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ನಿರ್ಲಕ್ಷಿಸಿ ಥಳಿಸಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿದೆ ಎಂದು ವರದಿಯಾಗಿದೆ.

ಇನ್ನೂ ಪೊಲೀಸರ ಥಳಿತದಿಂದ ಮುರುಗೇಶ್ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣವೇ ಆತನನ್ನು ಸೇಲಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ  ಇಂದು ಬೆಳಗ್ಗೆ ಆತ ಮೃತಪಟ್ಟಿದ್ದಾನೆ.

ಇತ್ತೀಚಿನ ಸುದ್ದಿ

Exit mobile version