ಟ್ರಂಪ್ ಪ್ರಮಾಣವಚನ ವಿಚಾರ: ಪ್ರಧಾನಿ ಮೋದಿಗೆ ಆಹ್ವಾನ ಇಲ್ಲ ಎಂದು ಬಿಜೆಪಿ ನಾಯಕನಿಂದಲೇ ವ್ಯಂಗ್ಯ

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಲಿದ್ದಾರೆ. ವೇಟರ್‌ಗೆ ಆಹ್ವಾನ ನೀಡಲಾಗಿದೆ. ಆದರೆ ಪ್ರಧಾನಿಗೆ ಆಹ್ವಾನ ನೀಡಲಾಗಿಲ್ಲ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಸ್ವಾಮಿ, “ಟ್ರಂಪ್ ರ ಅಮೆರಿಕ ಅಧ್ಯಕ್ಷರ ಔಪಚಾರಿಕ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ʼಭಾರತವನ್ನು ಆಹ್ವಾನಿಸಲಾಗಿದೆʼ ಎಂದು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಸುದ್ದಿಯನ್ನು ನೋಡಿ ನನ್ನ ಅಮೆರಿಕದ ಸ್ನೇಹಿತರು ನಗುತ್ತಿದ್ದಾರೆ. ವೇಟರ್‌ಗೆ ಆಹ್ವಾನ ನೀಡಲಾಗಿದೆ ಆದರೆ ಪ್ರಧಾನಿಗೆ ಆಹ್ವಾನ ನೀಡಲಾಗಿಲ್ಲ!! ಇದು ಇನ್ನೂ ದೊಡ್ಡ ಅವಮಾನವಲ್ಲವೇ?ʼ ಎಂದಿದ್ದಾರೆ.
ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ತರಲು ಪ್ರಧಾನಿ ಜೈಶಂಕರ್ ರನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಎಂದು ಸ್ವಾಮಿ ಈ ಹಿಂದೆ ಆರೋಪಿಸಿದ್ದರು.
ಡಿಸೆಂಬರ್ 24-29 ರವರೆಗೆ ಜೈಶಂಕರ್ ಅಮೆರಿಕಕ್ಕೆ ಭೇಟಿ ನೀಡಿದ್ದರು, ಇದು ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರ ಮೊದಲ ಅಧಿಕೃತ ಭೇಟಿಯಾಗಿತ್ತು.
ಈ ಹಿನ್ನೆಲೆಯಲ್ಲಿ, ಸ್ವಾಮಿ ಬಿಜೆಪಿ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದರು.
“ಮೋದಿ ವೇಟರ್ ರನ್ನು ಅಮೆರಿಕಕ್ಕೆ ಕಳುಹಿಸಿ, ಮೋದಿಗೆ ಆಹ್ವಾನವನ್ನು ಒದಗಿಸುವಂತೆ ಹೇಳಿದ್ದಾರೆ, ಇಲ್ಲದಿದ್ದರೆ ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುತ್ತಾರೆ. ಆದರೆ ಪ್ರಸ್ತುತ, ಡೊನಾಲ್ಡ್ ಟ್ರಂಪ್ ಮೋದಿಯನ್ನು ಆಹ್ವಾನಿಸುವ ಮನಸ್ಥಿತಿಯಲ್ಲಿಲ್ಲ” ಎಂದು ಸ್ವಾಮಿ ಎಕ್ಸ್ ನಲ್ಲಿ ಜನವರಿ 20 ರಂದು ನಡೆಯಲಿರುವ ಉದ್ಘಾಟನೆಯನ್ನು ಉಲ್ಲೇಖಿಸಿ ಹೇಳಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj