ಸಣ್ಣ ವ್ಯಾಪಾರಿಗಳ ಹಳೆಯ ತೆರಿಗೆ ಬಾಕಿ ಮನ್ನಾ: ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

siddaramaiah
23/07/2025

ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ಹೊರೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ನಡುವೆ ಆತಂಕಕ್ಕೊಳಗಾಗಿದ್ದ ಸಣ್ಣ ವ್ಯಾಪಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅವರು,  ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ ಟಿಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ–ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ, ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version