ನಿರಂತರ ಜಡಿ ಮಳೆಗೆ ಮನೆಯ ಗೋಡೆ ಕುಸಿತ

udupi
24/06/2023

ನಿನ್ನೆ ಸುರಿದ ನಿರಂತರ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ಸುಮಾ ರಮೇಶ್ ಆಚಾರ್ಯ ಅವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆ ಮಾಲಕಿ ಬೆಕ್ಕಿಗೆ ತಿಂಡಿ ಹಾಕಲು ಹೊರ ಬಂದಿದ್ದಾಗ ಈ ಘಟನೆ ನಡೆದಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಪಂಚಾಯತ್ ಸದಸ್ಯರಾದ ಜಲೇಶ್ ಶೆಟ್ಟಿ, ಮಾಜಿ ಸದಸ್ಯ ಸುಂದರ ನಾಯಕ್ ಕರ್ವಾಲ್ ಮತ್ತಿತರರು ಭೇಟಿ ನೀಡಿ ಸಾಂತ್ವನ ಹೇಳಿದ್ದು, ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version