ವಕ್ಫ್ ತಿದ್ದುಪಡಿ ಮಸೂದೆ: ಮಸೀದಿ, ಪೂಜಾ ಸ್ಥಳ ಅಥವಾ ‘ಕಬ್ರಸ್ತಾನ್’ಮುಟ್ಟುವುದಿಲ್ಲ: ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ದೇಶಾದ್ಯಂತ ಮುಸ್ಲಿಮ್ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ ‘ಕಬ್ರಸ್ತಾನ್’ಮುಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ, ಮುಸ್ಲಿಮ್ ಸಮುದಾಯದ ಮಹಿಳೆಯರಿಗೆ ಪ್ರಯೋಜನ ನೀಡುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸುತ್ತಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ವಕ್ಫ್ ಅನ್ನು ರಚಿಸಿದ ‘ವಖಿಫ್’ನ ಉದ್ದೇಶವನ್ನು ವ್ಯವಸ್ಥಾಪಕರಾಗಿರುವ ‘ಮುತ್ತವಲಿ’ ಸರಿಯಾಗಿ ಕಾರ್ಯಗತಗೊಳಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದಷ್ಟೇ ಇದರ ಉದಾತ್ತ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ವಕ್ಫ್ ಧಾರ್ಮಿಕ ಸಂಸ್ಥೆಯಲ್ಲ. ಅದು ಕಾನೂನುಬದ್ಧ ಅಥವಾ ಶಾಸನಬದ್ಧ ಸಂಸ್ಥೆಯಾಗಿದೆ. ‘ಮುತ್ತವಲಿ’ ಕೇವಲ ಸೂಪರಿಂಟೆಂಡೆಂಟ್ ಅಥವಾ ವ್ಯವಸ್ಥಾಪಕ. ಆಸ್ತಿಯ ಮೇಲೆ ಅವರಿಗೆ ಯಾವುದೇ ಹಕ್ಕುಗಳಿಲ್ಲ. ಏಕೆಂದರೆ ವಕ್ಫ್ ಅನ್ನು ರಚಿಸಿದ ನಂತರ, ಆಸ್ತಿ ಅಲ್ಲಾಹನದ್ದಾಗಿರುತ್ತದೆ. ಮಸೂದೆ ಮುಸ್ಲಿಂ ಮಹಿಳೆಯರಿಗೆ ಸಬಲೀಕರಣ ನೀಡುತ್ತದೆ. ವಿಧವೆಯರು ಮತ್ತು ಶೋಷಣೆಗೆ ಒಳಗಾದ ಜನತೆಗೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD