ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ: ಪ್ರಧಾನಿ ನರೇಂದ್ರ ಮೋದಿ - Mahanayaka

ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ: ಪ್ರಧಾನಿ ನರೇಂದ್ರ ಮೋದಿ

pm narendra modi
23/03/2026

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಲಾಪಗಳು ಸೋಮವಾರ ಪುನಾರಂಭಗೊಂಡವು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರ ಪರಿಣಾಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಮಾತನಾಡಿದರು.

ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಇದು ಭಾರತಕ್ಕೂ ಅಭೂತಪೂರ್ವ ಸವಾಲುಗಳನ್ನು ತಂದೊಡ್ಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವಿಶೇಷವಾಗಿ ಕಚ್ಚಾ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಇದರ ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ದೇಶದಲ್ಲಿ ಎಲ್‌ ಪಿಜಿ ಮತ್ತು ಪೆಟ್ರೋಲ್ ಅಭಾವ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಇಂತಹ ಸಮಯದಲ್ಲಿ ಸುಳ್ಳು ಸುದ್ದಿ ಹರಡುವವರ ಬಗ್ಗೆ ಮತ್ತು ಕಾಳದಂಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮನವಿ ಮಾಡಿದರು.

ಗಲ್ಫ್ ರಾಷ್ಟ್ರಗಳಲ್ಲಿ ಸುಮಾರು 1 ಕೋಟಿ ಭಾರತೀಯರು ವಾಸಿಸುತ್ತಿದ್ದಾರೆ. ಯುದ್ಧ ಆರಂಭವಾದಾಗಿನಿಂದ ಈವರೆಗೆ ಸುಮಾರು 3.75 ಲಕ್ಷ ಭಾರತೀಯರು ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ