12:30 AM Tuesday 21 - October 2025

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

rain
12/06/2023

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version