ಚಾರ್ಮಾಡಿಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
	
	
	
	
	
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ.
ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























