ವಯನಾಡ್: ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 89ಕ್ಕೆ ಏರಿಕೆ

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಪರ್ವತ ಪ್ರವಾಹದ ಪರಿಣಾಮ ಸಾವಿಗೀಡಾದವರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ಭೂಕುಸಿತದ ಪರಿಣಾಮವಾಗಿ ಎಲ್ಲೆಂದರಲ್ಲಿ ಮೃತದೇಹಗಳ ರಾಶಿಯೇ ಪತ್ತೆಯಾಗಿದೆ. ಭೂಕುಸಿತದಿಂದಾಗಿ ಸಾಕಷ್ಟು ಪ್ರದೇಶಗಳಿಗೆ ಸಂಪರ್ಕ ಸಂಪೂರ್ಣವಾಗಿ ಕಡಿತವಾಗಿದೆ.
ನೂರಾರು ಜನರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈವರೆಗೆ ಒಟ್ಟು 300ಕ್ಕೂ ಅಧಿಕ ಜನರನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ.
ಮಂಗಳವಾರ ಮುಂಜಾನೆ 2ರಿಂದ 4 ಗಂಟೆಯ ವೇಳೆಗೆ ಭೀಕರವಾಗಿ ಭೂಕುಸಿತವಾಗಿದೆ. ನೀರು, ಮಣ್ಣ ಹಾಗೂ ಬೃಹತ್ ಬಂಡೆಗಳ ರೌದ್ರ ನರ್ತನಕ್ಕೆ ಮುಂಡಕೈ ಮತ್ತು ಚೂರಲ್ ಮಾಲಾ ಪ್ರದೇಶ ನಲುಗಿ ಹೋಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97