8:57 PM Saturday 18 - October 2025

ಕನ್ನಡ ಬಗ್ಗೆ ತಪ್ಪು ಅರ್ಥ ಬಂದಿರುವುದಕ್ಕೆ  ಕ್ಷಮೆಯಾಚಿಸಿದ ಗೂಗಲ್ ಇಂಡಿಯಾ

google india
03/06/2021

ನವದೆಹಲಿ:  ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಮಾಹಿತಿ ಗೂಗಲ್ ನಲ್ಲಿ  ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್  ಕ್ಷಮೆಯಾಚಿಸಿದ್ದು,  ತಪ್ಪು ಅರ್ಥ ಬಂದಿರುವುದಕ್ಕೆ  ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ.

ಭಾರತ ಕೊಳಕು ಭಾಷೆ ಕನ್ನಡ ಎಂಬ ಅರ್ಥ ಗೂಗಲ್ ಸರ್ಚ್ ನಲ್ಲಿ ಕಂಡು ಬಂದಿದ್ದು, ಇದರಿಂದಾಗಿ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಭಾಷಾಭಿಮಾನಿಗಳು ಇದನ್ನು ತೀವ್ರವಾಗಿ ಖಂಡಿಸಿದ್ದರು. ಗೂಗಲ್ ವಿರುದ್ಧ ಕಾನೂನು ಹೋರಾಟಕ್ಕೂ ಸಜ್ಜಾಗಿದ್ದಾರೆ. ಇದೇ ಸಂದರ್ಭದಲ್ಲಿ ಗೂಗಲ್ ಕ್ಷಮೆ ಯಾಚಿಸಿದ್ದು, ಈ ಸಮಸ್ಯೆಯ ಬಗ್ಗೆ ಸ್ಪಷ್ಟನೆ ನೀಡಿದೆ.

ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ, ಕೆಲವೊಮ್ಮೆ ಇಂಟರ್ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುವುದು ನಮಗೆ ಗೊತ್ತು, ಆದರೆ ಯಾವುದೇ ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮಕೈಗೊಳ್ಳುತ್ತೇವೆ ಮತ್ತು ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಟ್ವಿಟ್ಟರ್ ಇಂಡಿಯಾ ಕ್ಷಮೆಯಾಚಿಸಿದೆ.

ಇತ್ತೀಚಿನ ಸುದ್ದಿ

Exit mobile version