ವಿವಿಪ್ಯಾಟ್ ಸ್ಲಿಪ್ ಎಣಿಕೆ ಮಾಡಬೇಕೆಂಬ ಅರ್ಜಿ: ಚುನಾವಣಾ ಆಯೋಗಕ್ಕೆ ತಾನು ಸೂಚನೆ ನೀಡಲು ಸಾಧ್ಯ ಇಲ್ಲ ಎಂದು ಹೇಳಿದ ಸುಪ್ರೀಂ

24/04/2024

ವಿವಿಪ್ಯಾಟ್‌ ಸ್ಲಿಪ್‌ಗಳನ್ನೂ ಶೇಕಡಾ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, “ಉತ್ತರಗಳು ಸಿಕ್ಕಿವೆ, ತೀರ್ಪು ಕಾಯ್ದಿರಿಸಲಾಗಿದೆ. ಈಗಿನ ವ್ಯವಸ್ಥೆಯನ್ನು ಬಲಪಡಿಸಲು ಏನು ಮಾಡಬಹುದೆಂದು ನೋಡೋಣ” ಎಂದು ಹೇಳಿದೆ.

ಚುನಾವಣೆಗಳಿಗೆ ತಾನು ನಿಯಂತ್ರಣಾ ಪ್ರಾಧಿಕಾರವಲ್ಲ ಹಾಗೂ ಚುನಾವಣಾ ಆಯೋಗಕ್ಕೆ ಅದರ ಕಾರ್ಯನಿರ್ವಹಣೆ ಕುರಿತು ಸೂಚನೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇವಿಎಂಗಳಲ್ಲಿ ಬಿದ್ದ ಮತಗಳ ಜೊತೆಗೆ ವಿವಿಪ್ಯಾಟ್‌ ಸ್ಲಿಪ್‌ಗಳನ್ನೂ ಶೇ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಮೇಲಿನಂತೆ ಹೇಳಿದೆ. ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.

ಕೇವಲ ಶಂಕೆಯ ಆಧಾರದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತ ಅವರ ಪೀಠ ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version