ಅಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ,ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವುದಿಲ್ಲ. ನಮ್ಮ ಗ್ಯಾರಂಟಿಗಳ ಮೇಲೆ ರಾಜ್ಯದ ಜನ ನಂಬಿಕೆ ಇಟ್ಟಿದ್ದಾರೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ರಾಜ್ಯಾದ್ಯಂತ ಜನರು ಬದಲಾವಣೆ ಬಯಸಿದ್ದಾರೆ. ಹಳೇ ಮೈಸೂರು ಭಾಗದಲ್ಲೂ ಜನ ಬದಲಾವಣೆ ಬಯಸಿದ್ದಾರೆ. ಅಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜೆಡಿಎಸ್ ಜೊತೆಗೆ ಯಾವುದೇ ಮಾತುಕತೆ ಆಗಿಲ್ಲ
ಜೆಡಿಎಸ್ ಜೊತೆ ಯಾವುದೇ ಮಾತುಕತೆಯಾಗಿಲ್ಲ: ಬಿಜೆಪಿಗೆ ಬಹುಮತ ಬಂದೇ ಬರಲಿದೆ ಎಂದು ಮಾಜಿ ಸಿಎಂ ಬಿಜೆಪಿಯ ಹಿರಿಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶ ಮೇ.13 ರಂದು ಹೊರ ಬೀಳಲಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವೇ ಗೆಲ್ಲುತ್ತೇವೆ. ಕರ್ನಾಟಕದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ 115 ರಿಂದ 117 ಸ್ಥಾನ ಬಂದೇ ಬರುತ್ತದೆ. ಜೆಡಿಎಸ್ ಜೊತೆ ಯಾವುದೇ ಮಾತುಕತೆಯಾಗಿಲ್ಲ. ಬಿಜೆಪಿಗೆ ಬಹುಮತ ಬರಲಿದ್ದು, ನಾವು ಸರ್ಕಾರ ರಚನೆ ಮಾಡೇ ಮಾಡುತ್ತೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























