ನಾವು ಒಳ್ಳೆಯವರಾಗಿರುವುದರಿಂದ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಗೆ 1 ವಾರ ರಜೆ ನೀಡಿದ್ದೇವೆ: ಟ್ರಂಪ್ ವ್ಯಂಗ್ಯ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ಇರಾನ್ ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ಕಾರ್ಯಕ್ರಮಗಳ ಕುರಿತು ತೀಕ್ಷ್ಣವಾದ ವ್ಯಂಗ್ಯವಾಡಿದ್ದಾರೆ. “ನಾವು ಒಳ್ಳೆಯವರಾಗಿರುವುದರಿಂದ ಇರಾನ್ಗೆ ಒಂದು ವಾರ ರಜೆ ನೀಡಿದ್ದೇವೆ” ಎಂದು ಅವರು ಹೇಳಿದ್ದಾರೆ.
ಅಮೆರಿಕದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ಅಂಗವಾಗಿ ಮೌಂಟ್ ರಶ್ಮೋರ್ನಲ್ಲಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ವಾಷಿಂಗ್ಟನ್ ಇರಾನ್ ವಿರುದ್ಧ ತೀವ್ರ ದಾಳಿ ನಡೆಸಿದೆ ಮತ್ತು ಆ ದೇಶವು ಈಗ ರಾಜಿ ಮಾಡಿಕೊಳ್ಳಲು ಹಾತೊರೆಯುತ್ತಿದೆ ಎಂದು ಪ್ರತಿಪಾದಿಸಿದರು.
“ನಾವು ಇರಾನ್ಗೆ ತಕ್ಕ ಶಾಸ್ತಿ ಮಾಡಿದ್ದೇವೆ. ಅವರು ರಾಜಿ ಮಾಡಿಕೊಳ್ಳಲು ಕಾಯುತ್ತಿದ್ದಾರೆ. ನಾವು ಒಳ್ಳೆಯವರಾಗಿರುವ ಕಾರಣ, ಅಂತ್ಯಕ್ರಿಯೆಗಾಗಿ ಅವರಿಗೆ ಒಂದು ವಾರ ರಜೆ ನೀಡಿದ್ದೇವೆ” ಎಂದು ಟ್ರಂಪ್ ತಮ್ಮ ಭಾಷಣದಲ್ಲಿ ತಿಳಿಸಿದರು.
ಈ ವರ್ಷದ ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಪ್ರಸ್ತುತ ಟೆಹ್ರಾನ್ನ ಗ್ರಾಂಡ್ ಮೊಸಲ್ಲಾದಲ್ಲಿ ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಿರುವ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























