ನಕ್ಸಲ್ ಕಾಲ ಮುಗಿಯಿತು ಎಂದು ಅಂದುಕೊಂಡಿದ್ದೆವು: ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ಪರಮೇಶ್ವರ್ ಹೇಳಿದಿಷ್ಟು!
ಬೆಂಗಳೂರು: ನಕ್ಸಲ್ ಲೀಡರ್ ವಿಕ್ರಮ್ ಗೌಡನನ್ನು ಪೊಲೀಸರು ಎನ್ ಕೌಂಟರ್ ಮಾಡಿರುವುದನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೃಢಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ವರ್ಷಗಳಿಂದ ವಿಕ್ರಂ ಗೌಡನನ್ನು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ 20 ವರ್ಷಗಳಿಂದ ವಿಕ್ರಂ ಗೌಡ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್ ಕೌಂಟರ್ ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ಎನ್ ಕೌಂಟರ್ ಆಗಿದೆ. ಪೊಲೀಸರ ಮೇಲೆ ವಿಕ್ರಂ ಗೌಡ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್ ಕೌಂಟರ್ ಮಾಡಿದ್ದಾರೆ. ವಿಕ್ರಂ ಗೌಡ ಜೊತೆಗಿದ್ದ ಮೂವರು ಓಡಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಎಂದು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ಇಬ್ಬರು ನಕ್ಸಲರು ಪತ್ತೆಯಾಗಿದ್ದಾರೆ. ಅವರಿಬ್ಬರು ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಆಗ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತು. ವಿಕ್ರಂ ಗೌಡನನ್ನು ಎನ್ ಕೌಂಟರ್ ಮಾಡುವುದು ಪೊಲೀಸರಿಗೆ ಅನಿವಾರ್ಯವಾಯ್ತು ಎಂದು ಅವರು ತಿಳಿಸಿದರು.
ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅರಣ್ಯ ಭಾಗದಲ್ಲಿದ್ದು ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೆ, ಈ ಥರ ಘಟನೆ ಆಗೋದು ಸಹಜ ಎಂದು ಪರಮೇಶ್ವರ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97