ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ: ಸಚಿವ ಬೈರತಿ ಸುರೇಶ್

bairathi
18/07/2024

ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ನ್ನು 7 ದಿನಗಳ ಕಾಲ ಮುಚ್ಚಿಸುವುದಾಗಿ ಸಚಿವ ಬೈರತಿ ಸುರೇಶ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಜಿ.ಟಿ ಮಾಲ್ ನಲ್ಲಿ ರೈತರೊಬ್ಬರಿಗೆ ಪಂಚೆ ಉಟ್ಟುಕೊಂಡು ಬಂದಿರುವುದಕ್ಕೆ ಪ್ರವೇಶ ನಿರಾಕರಿಸಿದ ಘಟನೆಗೆ ಸಂಬಂಧಿಸಿದಂತೆ ವಿಧಾನ ಸಭೆಯಲ್ಲಿ ಚರ್ಚೆ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದರು.

ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು.

ಸ್ಪೀಕರ್ ಅವರ ಮಾತಿಗೆ ಶಾಸಕ ಲಕ್ಷ್ಮಣ್ ಸವದಿ, ಶಾಸಕ ಪ್ರಕಾಶ್ ಕೋಳಿವಾಡ ಧ್ವನಿಗೂಡಿಸಿದರು. ಒಟ್ಟಾರೆಯಾಗಿ ಇಡೀ ಸದನ ಮಾಲ್ ನಡವಳಿಕೆ ಖಂಡಿಸಿ ಆಕ್ರೋಶವನ್ನು ವ್ಯಕ್ತಪಡಿಸಿತು. ಆ ಬಳಿಕ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಣೆ ಮಾಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version