ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಇಳಿಸಿದರೆ ಗಂಭೀರವಾಗಿ ಪರಿಗಣಿಸುತ್ತೇವೆ: ಶ್ರೀರಾಮ ಸೇನೆ ಎಚ್ಚರಿಕೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪ್ರಮೋದ್ ಮುತಾಲಿಕ್ ರಿಗೆ ಬೆಂಬಲ ನೀಡಬೇಕು ಶ್ರೀರಾಮ ಸೇನೆ ಒತ್ತಾಯಿಸಿದೆ.
ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ಸದ್ಯದ ಸನ್ನಿವೇಶದಲ್ಲಿ ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ, ಹಿಂದುತ್ವ ನಾಯಕರ, ಕಾರ್ಯಕರ್ತರ ಕಡೆಗಣನೆ, ಅವರ ಮೇಲೆ ಅನವಶ್ಯಕ ಕೇಸ್ ಇದರಿಂದಾಗಿ ಇಡೀ ಸಮಾಜಕ್ಕೆ ಬೇಸರವಾಗಿದೆ ಎಂದರು.
ಪ್ರಾಮಾಣಿಕ, ಬದ್ಧತೆಯ ಜನಪ್ರತಿನಿಧಿಗಳನ್ನು ಸಮಾಜ ನಿರೀಕ್ಷಿಸುತ್ತಿದ್ದು, ಇದಕ್ಕೆ ಪ್ರಮೋದ್ ಮುತಾಲಿಕ್ ಸೂಕ್ತ ವ್ಯಕ್ತಿ ಎಂಬ ನಿರ್ಧಾರದಿಂದಾಗಿ ಅವರನ್ನು ಕಾರ್ಕಳದಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಮುತಾಲಿಕ್ ರನ್ನು ಬೆಂಬಲಿಸದೆ ಬಿಜೆಪಿ ಕಾರ್ಕಳದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಹಿಂದುತ್ವ ಸಂಘಟನೆಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಸಂದರ್ಭ ಬರಬಹುದು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























